ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ. 1. ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತ ದಾನ ಒಬ್ಬರ ಜೀವವನ್ನು ಉಳಿಸುತ್ತದೆ. ಅದಕ್ಕೆ ಯಾವುದೇ ಪರ್ಯಾಯವಿಲ್ಲ. ಕೇವಲ ಒಂದು ದಾನವು ನಾಲ್ವರ ಜೀವವನ್ನು ಉಳಿಸುತ್ತದೆ. 2. ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. […]
↧