ಕರಾಚಿ, ಡಿ. 16: ಪೇಶಾವರದ ಸೇನಾ ಶಾಲೆಯ ಮೇಲೆ ತಾಲಿಬಾನ್ ಉಗ್ರರು ನಡೆಸಿದ ದಾಳಿಯಿಂದ ಉದ್ಭವಿಸಿದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕಿಸ್ತಾನದ ಪ್ರಧಾನಿ ನವಾಝ್ ಶರೀಫ್ ಮಂಗಳವಾರ ಪೇಶಾವರಕ್ಕೆ ಧಾವಿಸಿದರು. ತಾಲಿಬಾನ್ ನಡೆಸಿದ ಭೀಕರ ದಾಳಿಯಲ್ಲಿ 132 ಮಕ್ಕಳು ಹಾಗೂ 9 ಶಾಲಾ ಸಿಬ್ಬಂದಿ ಸೇರಿ ಒಟ್ಟು 141 ಮಂದಿ ಮೃತಪಟ್ಟಿದ್ದಾರೆ. 124 ಮಂದಿ ಗಾಯಗೊಂಡಿದ್ದಾರೆ. ದಾಳಿಯನ್ನು ಖಂಡಿಸಿರುವ ಶರೀಫ್, ಮಕ್ಕಳ ಸಾವಿಗೆ ಕಾರಣರಾದ ಭಯೋತ್ಪಾದಕರನ್ನು ಸುಮ್ಮನೆ ಬಿಡಬಾರದು ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘‘ನಾನು ಇಸ್ಲಾಮಾಬಾದ್ನಲ್ಲಿ ಕುಳಿತಿರಲು ಸಾಧ್ಯವಿಲ್ಲ. […]
↧