ನವದೆಹಲಿ: ಇಂಡೋನೇಷ್ಯಾದಲ್ಲಿ ಸೆರೆಸಿಕ್ಕಿದ್ದ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದೆ. ಮೂಲಗಳ ಪ್ರಕಾರ ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಈಗಾಗಲೇ ಇಂಡೋನೇಷ್ಯಾ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಛೋಟಾ ರಾಜನ್‌ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಅಪರಾಧಿಗಳ ಹಸ್ತಾಂತರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳು ಮತ್ತು ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿಯನ್ನೊಳಗೊಂಡ ವರದಿ ಸಲ್ಲಿಸಬೇಕಾಗಿರುವುದರಿಂದ ಸಿಬಿಐ ಮತ್ತು ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ಇದರ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದುಬಂದಿದೆ. […]
↧