ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ಬಿಬಿಸಿ ಸುದ್ದಿ ವಾಹಿನಿಯ ಮಾಜಿ ನಿರೂಪಕಿ ರೆಹಾಮ್ ಖಾನ್ ಅವರೊಂದಿಗೆ ರಹಸ್ಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ‘62ರ ಹರೆಯದ ಇಮ್ರಾನ್ ಸದ್ಯ ಪಾಕಿಸ್ತಾನದ ಸುದ್ದಿವಾಹಿನಿಯೊಂದರಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ 41 ವರ್ಷದ ರೆಹಾಮ್ ಜತೆ ಹೋದ ವಾರಂತ್ಯದಲ್ಲಿ ಮದುವೆಯಾಗಿದ್ದಾರೆ’ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರೆಹಾಮ್ ಈಗಾಗಲೇ ವಿವಾಹವಾಗಿ ವಿಚ್ಛೇದನವನ್ನೂ ಪಡೆದಿದ್ದಾರೆ. ಅವರು ಮೂರು ಮಕ್ಕಳ ತಾಯಿಯಾಗಿದ್ದು ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಜೆಮಿಮಾ ಖಾನ್ ಅವರನ್ನು […]
↧