ಹೊಸದಿಲ್ಲಿ: ಮುಂಬರುವ ಗಣರಾಜ್ಯೋತ್ಸವದ ಅತಿಥಿಯಾಗಿ ಆಗಮಿಸುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಎಂದೂ ಕಂಡು ಕೇಳರಿಯದ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ಕೇಂದ್ರ ಸರಕಾರ ಕಲ್ಪಿಸುತ್ತಿದೆ. ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಒಬಾಮಾರ ಜತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಣರಾಜ್ಯೋತ್ಸವಕ್ಕೆ ಭದ್ರತೆ ನೀಡಲಾಗುತ್ತಿದೆ. ಒಬಾಮಾ ಅವರಿಗಂತೂ ಏಳು ಸ್ತರದ ಭದ್ರತಾ ವ್ಯವಸ್ಥೆ ರೂಪಿಸಲು ನಿರ್ಧರಿಸಲಾಗಿದೆ. ಅಮೆರಿಕ ಅಧ್ಯಕ್ಷರೊಬ್ಬರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಅದನ್ನೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಜ.25ರಿಂದ […]
↧