ನವದೆಹಲಿ (ಏಜೆನ್ಸಿಸ್): ಗುಜರಾತ್‌ನಲ್ಲಿ ನಡೆದಿದ್ದ ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ಇಶ್ರತ್ ಜಹಾನ್ ಮಾನವ ಬಾಂಬರ್ ಎಂದು ಡೇವಿಡ್ ಹೆಡ್ಲಿ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾನೆ. ಇಂದು ನಡೆದ ವಿಡಿಯೊ ಕಾನ್ಫರೆನ್ಸ್ ಸಮಯದಲ್ಲಿ ಈ ಸ್ಫೋಟಕ ಮಾಹಿತಿಯನ್ನು ಹೆಡ್ಲಿ ಹೊರಹಾಕಿದ್ದಾನೆ. ಇಶ್ರತ್ ಜಹಾನ್ ಲಷ್ಕರ್ ಉಗ್ರ ಸಂಘಟನೆಗೆ ಸೇರಿದ್ದು ಮಾನವ ಬಾಂಬರ್ ಆಗಿದ್ದಳು ಎಂದು ಹೆಡ್ಲಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಇಶ್ರತ್ ಜಹಾನ್ ಸೇರಿದಂತೆ ನಾಲ್ವರು ಉಗ್ರರನ್ನು ಗುಜರಾತ್‌ನಲ್ಲಿ ಎನ್‌ಕೌಂಟರ್ ಮಾಡಲಾಗಿತ್ತು.
↧